ಮೈಸೂರು: ವೈದ್ಯರ ಬೇಜವಾಬ್ದಾರಿಯಿಂದಾಗಿ ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಮಗು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದ ಬೆಂಗಳೂರಿನ ಸಂಜೀವಿನಿ ಆಸ್ಪತ್ರೆ ಘಟನೆ ಬೆನ್ನಲೇ ಮೈಸೂರಿನ ಆಸ್ಪತ್ರೆಯೊಂದರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ವಿಶೇಷಚೇತನ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಖುದ್ದು ನ್ಯಾಯಾಧೀಶರೇ ಬಂದು ಮಗುವನ್ನು ದಾಖಲಿಸಿ ಚಿಕಿತ್ಸೆ ನೀಡುವಂತೆ ಹೇಳಿದರೂ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ವೈದ್ಯರ ನಿರ್ಲಕ್ಷಕ್ಕೆ ವಿಶೇಷಚೇತನ ಮಗು ಸಾವನ್ನಪ್ಪಿದ್ದು, ಮೈಸೂರಿನ ಚಲುವಾಂಬ ಆಸ್ಪತ್ರೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ವಿಶೇಷಚೇತನ ಮಗುವಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಮಗು ಉಸಿರುಚೆಲ್ಲಿದೆ. ಮಗುವಿನ ಪೋಷಕರು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ದೇವರಾಜ ಪೊಲೀಸ್ ಠಾಣೆಯಲ್ಲಿ ಆಸ್ಪತ್ರೆ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದಾರೆ.