ಬೆಂಗಳೂರು: ಇತ್ತೀಚೆಗೆ ರೋಗಿಗಳು ಮತ್ತು ಅವರ ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆಯಂತಹ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಕ್ರಮ ಕೈಗೊಂಡಿದೆ.
ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದಲ್ಲಿ ಅಂತವರಿಗೆ ಗರಿಷ್ಠ 7 ವರ್ಷದವರೆಗೆ ಜೈಲು ಶಿಕ್ಷೆ, 2 ಲಕ್ಷ ರೂಪಾಯಿವರೆಗೆ ದಂಡ ವಿಧಿಸಲಾಗುವುದು. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.
ಆಸ್ಪತ್ರೆಯಲ್ಲಿ ಭದ್ರತೆ ಹೆಚ್ಚಿಸಲು, ವೈದ್ಯರ ಮೇಲೆ ಹಲ್ಲೆ ತಡೆಗಟ್ಟಲು ಎಲ್ಲಾ ಆಸ್ಪತ್ರೆಗಳು ಆಸ್ಪತ್ರೆ ಭದ್ರತಾ ಸಮಿತಿ ಮತ್ತು ಹಿಂಸೆ ತಡೆ ಸಮಿತಿ ಸ್ಥಾಪಿಸಬೇಕೆಂದು ಸೂಚನೆ ನೀಡಲಾಗಿದೆ. ಕಾನೂನು ಜಾಗೃತಿ ಮೂಡಿಸುವ ಬಗ್ಗೆ ಎಲ್ಲಾ ಆಸ್ಪತ್ರೆಗಳಲ್ಲಿ ಕಾನೂನು ನಿಬಂಧನೆ ಫಲಕಗಳನ್ನು ಸಾರ್ವಜನಿಕರಿಗೆ ಕಾಣುವ ರೀತಿಯಲ್ಲಿ ಪ್ರದರ್ಶಿಸಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.