
ನವದೆಹಲಿ: ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣ ವಿರೋಧಿಸಿ ಜೂನ್ 18 ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಭಾರತೀಯ ವೈದ್ಯಕೀಯ ಸಂಘ ತೀರ್ಮಾನ ಕೈಗೊಂಡಿದೆ.
ಜೂನ್ 18 ರಂದು ದೇಶಾದ್ಯಂತ ವೈದ್ಯರು ಕಪ್ಪುಪಟ್ಟಿ, ಬ್ಯಾಡ್ಜ್ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ. ರಕ್ಷಕರನ್ನು ರಕ್ಷಿಸಿ ಎಂಬ ಘೋಷಣೆಯ ಅಡಿಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಕೂಡ ಮಾಡಲಾಗುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ.
ಇತ್ತೀಚೆಗೆ ಅಸ್ಸಾಂ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಉತ್ತರಪ್ರದೇಶದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ.