ರಾಯಚೂರು: ಮುಖ್ಯಮಂತ್ರಿಗಳ ಭವಿಷ್ಯ ನಿಧಿಯಡಿ ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ ಮಾಡಿಕೊಳ್ಳಲಾಗುವುದು. ಜತೆಗೆ ಆರೋಗ್ಯ ಸುಧಾರಣೆಗೆ ಹೊಸ ಯೋಜನೆ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಯಚೂರಿನ ಎಲ್‌ಬಿಎಸ್ ನಗರ ಬಡಾವಣೆಯ ನಮ್ಮ ಕ್ಲಿನಿಕ್ ನಲ್ಲಿ ರಾಜ್ಯಮಟ್ಟದ ಇಂದ್ರಧನುಷ್ 5.0 ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು
ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ನೀಗಿಸುವ ಉದ್ದೇಶದಿಂದ ತಿಂಗಳೊಳಗೆ ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಲವು ವೈದ್ಯರ ಹುದ್ದೆಗಳು ಖಾಲಿ ಇವೆ. ಇದರಿಂದ ಜನರಿಗೆ ಸಮರ್ಪಕ ಚಿಕಿತ್ಸೆ ಸಿಗದಂತಾಗಿದೆ. ಹೀಗಾಗಿ ಮುಖ್ಯಮಂತ್ರಿಗಳ ಭವಿಷ್ಯ ನಿಧಿಯಡಿ ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗುವುದು. ಆರೋಗ್ಯ ಸುಧಾರಣೆಗೆ ಹೊಸ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.