alex Certify ಕೆ -ಸೆಟ್ ಪರೀಕ್ಷೆ ಅರ್ಹ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಜ. 31ರಂದು ಮೂಲ ದಾಖಲಾತಿ ಪರಿಶೀಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆ -ಸೆಟ್ ಪರೀಕ್ಷೆ ಅರ್ಹ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಜ. 31ರಂದು ಮೂಲ ದಾಖಲಾತಿ ಪರಿಶೀಲನೆ

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್) ಪರೀಕ್ಷೆ ಅರ್ಹ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಜ. 31ರಂದು ಮೂಲ ದಾಖಲಾತಿ ಪರಿಶೀಲನೆ ನಡೆಯಲಿದೆ.

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹರಾದ ಎಲ್ಲಾ 41 ವಿಷಯಗಳ ಅಭ್ಯರ್ಥಿಗಳಿಗೆ ದಿನಾಂಕ 13.01.2025 ರಿಂದ ದಿನಾಂಕ 20.01.2025 ರ ವರೆಗೆ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವಂತೆ ತಿಳಿಸಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಗೈರು ಹಾಜರಾಗಿರುವುದು ಕಂಡುಬಂದಿರುತ್ತದೆ.

ಆದ್ದರಿಂದ ದಿನಾಂಕ 13.01.2025 ರಿಂದ 20.01.2025 ರವರೆಗೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಕೆಸೆಟ್-2024 ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪಟ್ಟಿಯಲ್ಲಿನ ಗೈರುಹಾಜರಾದ ಅಭ್ಯರ್ಥಿಗಳು ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಂಡು ಫಲಿತಾಂಶ ಘೋಷಣೆಗೊಂಡಿರುವ ಅರ್ಹ ಅಭ್ಯರ್ಥಿಗಳು ಮಾತ್ರ ದಿನಾಂಕ 31.01.2025 ರಂದು ಬೆಳಿಗ್ಗೆ 10.00 ಕ್ಕೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗತಕ್ಕದ್ದು.

ಶೈಕ್ಷಣಿಕ ಅರ್ಹತೆ ಮತ್ತು ಮೀಸಲಾತಿ ಸಂಬಂಧಿಸಿದ ಎಲ್ಲಾ ನಿಬಂಧನೆಗಳು ಹಾಗೂ ಮೂಲ ದಾಖಲೆಗಳ ಪರಿಶೀಲನೆಗೆ ಸಲ್ಲಿಸಬೇಕಾದ ದಾಖಲಾತಿ ಪ್ರಮಾಣ ಪತ್ರಗಳ ವಿವರಗಳಿಗೆ ದಿನಾಂಕ 13.07.2024 ರ ಅಧಿಸೂಚನೆಯನ್ನು ಮತ್ತು ದಿನಾಂಕ 09.01.2025 ರ ಮಾರ್ಗಸೂಚಿಯನ್ನು ಓದಿಕೊಳ್ಳಲು ಸೂಚಿಸಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗದ ಅಭ್ಯರ್ಥಿಗಳು ಹಾಗೂ ವಿಶೇಷ ಚೇತನ ಮತ್ತಿತರ ಮೀಸಲಾತಿಗೆ ಸಂಬಂಧಿಸಿದ ಅಭ್ಯರ್ಥಿಗಳು ತಮ್ಮ ಮೀಸಲಾತಿಗೆ ಸಂಬಂಧಿಸಿದಂತೆ ನಿಗದಿತ ನಮೂನೆಯಲ್ಲಿ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ಪ್ರವರ್ಗದ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.

ವಿವಾಹಿತ ಮಹಿಳಾ ಅಭ್ಯರ್ಥಿಗಳು (ಕೆಸೆಟ್-2024ರ ಅರ್ಜಿಯಲ್ಲಿ ವಿವಾಹಿತರೆಂದು ನಮೂದಿಸಿ 2ಎ, 2ಬಿ, 3ಎ, 3ಬಿ ಮೀಸಲಾತಿ ಕೋರಿರುವ ಮಹಿಳಾ ಅಭ್ಯರ್ಥಿಗಳು) ತಮ್ಮ ಪತಿಯ ಹೆಸರಿನೊಂದಿಗೆ ಜಾರಿಯಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಮೂಲ ದಾಖಲೆಗಳ ಪರಿಶೀಲನೆ ಸಮಯದಲ್ಲಿ ಸಲ್ಲಿಸಲು ಸೂಚಿಸಿದೆ.

ಸೂಚನೆ:

ವಿವಿಧ ಕಾರಣಗಳಿಂದ ದಿನಾಂಕ 13.01.2025 ರಿಂದ 20.01.2025 ರವರೆಗೆ ದಾಖಲಾತಿ ಪರಿಶೀಲನೆ ಪೂರ್ಣಗೊಳ್ಳದ ಅಭ್ಯರ್ಥಿಗಳು ಅಗತ್ಯ ದಾಖಲೆಗಳು ಈಗ ಲಭ್ಯವಿದ್ದಲ್ಲಿ ಮಾತ್ರ ದಿನಾಂಕ 31.01.2025 ರಂದು ದಾಖಲಾತಿ ಪರಿಶೀಲನೆಗೆ ಹಾಜರಾಗತಕ್ಕದ್ದು.

ಅರ್ಹತಾ ಪಟ್ಟಿಯಲ್ಲಿ ಹೆಸರಿರುವ ಆದರೆ, ಸ್ನಾತಕೋತ್ತರ ಪದವಿ ಪೂರ್ಣಗೊಳ್ಳದ / ಎಲ್ಲಾ ವರ್ಷಗಳ / ಎಲ್ಲಾ ಸೆಮಿಸ್ಟರ್‌ಗಳ ಅಂಕಪಟ್ಟಿ ಇಲ್ಲದಿರುವ ಅಭ್ಯರ್ಥಿಗಳು ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗುವ ಅಗತ್ಯತೆ ಇರುವುದಿಲ್ಲ. ಸದರಿ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಪೂರ್ಣಗೊಂಡ ನಂತರ ಎಲ್ಲಾ ವರ್ಷಗಳ / ಎಲ್ಲಾ ಸೆಮಿಸ್ಟರ್‌ಗಳ ಅಂಕ ಪಟ್ಟಿಗಳೊಂದಿಗೆ ಮೂಲ ದಾಖಲಾತಿ ಪರಿಶೀಲನೆಗೆ ಪ್ರಾಧಿಕಾರದ ವೆಬ್‌ ಸೈಟ್‌ ನಲ್ಲಿ ಸೂಚಿಸಲ್ಪಡುವ ಮುಂಬರುವ ದಿನಾಂಕಗಳಂದು ಹಾಜರಾಗತಕ್ಕದ್ದು.

ದೂರವಾಣಿ: 080-23 564 583

ಸಹಾಯವಾಣಿ: 080-23 460 460.

ಇ-ಮೇಲ್: keauthority-ka@nic.in

ವೆಬ್‌ಸೈಟ್: http://kea.kar.nic.in

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...