ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪಿಜಿಸಿಇಟಿ -2021 ರ ವಿಜೇತರಿಗೆ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಜನವರಿ 21 ರವರೆಗೆ ದಾಖಲೆಗಳ ಪರಿಶೀಲನೆಗೆ ಅವಕಾಶ ನೀಡಲಾಗಿದೆ.
ಬೆಂಗಳೂರಿನ ಕೆಇಎ ಕಚೇರಿಗೆ ಹಾಜರಾಗಲು ಸಾಧ್ಯವಾಗದ ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಲು KEA ವೆಬ್ಸೈಟ್ನಲ್ಲಿ ಲಿಂಕ್ ನೀಡಲಾಗಿದೆ. ಅಭ್ಯರ್ಥಿಗಳು ಆನ್ಲೈನ್ ಅರ್ಜಿಯಲ್ಲಿ ನಮೂದಿಸಿದ ಎಲ್ಲ ಮೂಲ ದಾಖಲೆಗಳನ್ನು ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಲು ತಿಳಿಸಲಾಗಿದೆ.
ಯುಜಿ ನೀಟ್ ಗೆ ಅರ್ಜಿ ಸಲ್ಲಿಸಿ ಕೊರೋನಾ ಮೊದಲಾದ ಕಾರಣಗಳಿಂದ ದಾಖಲಾತಿ ಪರಿಶೀಲನೆಗೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಜನವರಿ 24 ರಂದು ಬೆಳಿಗ್ಗೆ 10 ಗಂಟೆಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ದಾಖಲೆ ಪರಿಶೀಲನೆ ಕಾರ್ಯ ನಡೆಸಲಾಗುತ್ತದೆ.
ಅನೇಕ ವಿವಿಗಳು ಮರುಮೌಲ್ಯಮಾಪನ ಫಲಿತಾಂಶ ಪ್ರಕಟಿಸಿದ ಹಿನ್ನೆಲೆಯಲ್ಲಿ ಪಿಜಿಸಿಇಟಿ ದಾಖಲಾತಿ ಪರಿಶೀಲನೆಗೆ ಜನವರಿ 24ರ ವರೆಗೆ ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.