
ಪುರುಷರು ಕೊರೊನಾ ಲಸಿಕೆಯನ್ನ ಸ್ವೀಕಾರ ಮಾಡೋದ್ರಿಂದ ಅವರಲ್ಲಿ ಸಂತಾನೋತ್ಪತ್ತಿ ಸಾಮರ್ಥ್ಯ ಕುಸಿಯಲಿದೆ ಎಂಬ ಮಾತೂ ಸಹ ವ್ಯಾಪಕವಾಗಿ ಕೇಳಿ ಬರ್ತಾ ಇತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾ ಲಸಿಕೆಯ ಸ್ವೀಕಾರದಿಂದ ಈ ರೀತಿಯ ಯಾವುದೇ ಸಮಸ್ಯೆ ಉಂಟಾಗೋದಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಕೊರೊನಾ ಲಸಿಕೆಯಿಂದ ಪುರುಷ ಹಾಗೂ ಮಹಿಳೆಯರಲ್ಲಿ ಸಂತಾನೋತ್ಪತ್ತಿ ಸಾಮರ್ಥ್ಯ ಕುಸಿಯಲಿದೆ ಎಂಬ ವಿಚಾರ ವೈಜ್ಞಾನಿಕವಾಗಿ ಸಾಬೀತಾಗಿಲ್ಲ. ಮಗುವಿಗೆ ಹಾಲುಣಿಸುವ ಮಹಿಳೆಯರೂ ಸಹ ಈ ಲಸಿಕೆಯನ್ನ ಪಡೆಯಬಹುದಾಗಿದೆ ಎಂದು ಕೇಂದ್ರ ಸಚಿವಾಲಯ ಹೇಳಿದೆ.
ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಕೂಡ ಈ ವಿಚಾರವಾಗಿ ಟ್ವೀಟ್ ಮಾಡಿದ್ದು ಲಸಿಕೆಯಿಂದ ಸಂತಾನೋತ್ಪತ್ತಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.