ಮಂಗಳೂರು: ಮಾಜಿ ಶಾಸಕ ಮೊಯಿದಿನ್ ಬಾವಾ ಅವರ ಮೇಲೆ ಬೀದಿ ನಾಯಿ ದಾಳಿ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ನಗರದ ಕದ್ರಿ ಉದ್ಯಾನವನದಲ್ಲಿ ಘಟನೆ ನಡೆದಿದೆ.
ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕರಾದ ಮೊಯಿದಿನ್ ಬಾವಾ ಅವರು ಕದ್ರಿ ಪಾರ್ಕ್ ನಲ್ಲಿ ವಾಕಿಂಗ್ ಮಾಡುವ ಸಂದರ್ಭದಲ್ಲಿ ಬೀದಿ ನಾಯಿ ದಾಳಿ ಮಾಡಿದೆ. ಘಟನೆಯ ವೇಳೆ ಬಾವಾ ಅವರ ಕಾಲಿಗೆ ಬಲವಾದ ಏಟು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬಾವಾ ಅವರಿಗೆ ನಡೆದಾಡಲು ಸಾಧ್ಯವಾಗದೆ ಗಾಲಿ ಕುರ್ಚಿ ಆಶ್ರಯಸಿದ್ದಾರೆ.