ಮಂಡ್ಯ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ಆತಂಕದಲ್ಲಿ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಹುಚ್ಚುನಾಯಿ ದಾಳಿಗೆ ಐವರು ಪ್ರವಾಸಿಗರು ಗಾಯಗೊಂಡಿರುವ ಆಘಾತಕಾರಿ ಘಟನೆ ಕೆ.ಆರ್.ಎಸ್ ನಲ್ಲಿ ನಡೆದಿದೆ.
ಮಂಡ್ಯ ಜಿಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಬೃಂದಾವನ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರ ಮೇಲೆ ಹುಚ್ಚುನಾಯಿ ದಾಳಿ ಮಾಡಿದೆ. ಐವರು ಪ್ರವಾಸಿಗರನ್ನು ಹುಚ್ಚುನಾಯಿ ಕಚ್ಚಿದ್ದು, ನಾಯಿ ದಾಳಿಯಿಂದ ಪ್ರವಾಸಿಗರು ಗಾಯಗೊಂಡಿದ್ದಾರೆ.
ಗಾಯಾಳು ಪ್ರವಾಸಿಗರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.