alex Certify ಝೋಮ್ಯಾಟೋ ಡೆಲಿವರಿ ಬಾಯ್ ಮೇಲೆ ನಾಯಿ ಅಟ್ಯಾಕ್; ಆಹಾರ ವಿತರಣೆಗೆ ಹೋದಾಗಲೇ ಘಟನೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಝೋಮ್ಯಾಟೋ ಡೆಲಿವರಿ ಬಾಯ್ ಮೇಲೆ ನಾಯಿ ಅಟ್ಯಾಕ್; ಆಹಾರ ವಿತರಣೆಗೆ ಹೋದಾಗಲೇ ಘಟನೆ…!

ಆಹಾರ ವಿತರಣೆ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ಚಳಿ, ಬಿಸಿಲು, ಮಳೆ ಎನ್ನದೆ ಎಲ್ಲ ಸಂದರ್ಭದಲ್ಲೂ ತಮ್ಮ ಕಾಯಕದಲ್ಲಿ ತೊಡಗಿರುತ್ತಾರೆ. ಜೀವನ ನಿರ್ವಹಣೆಗಾಗಿ ಈ ಕೆಲಸ ಮಾಡುವ ಇವರುಗಳಿಗೆ ಯಾವುದೇ ಸುರಕ್ಷತೆ ಇರುವುದಿಲ್ಲ. ಇಂತಹುದೇ ಘಟನೆಯೊಂದರ ವಿಡಿಯೋ ಈಗ ವೈರಲ್ ಆಗಿದೆ.

ಮುಂಬೈನಲ್ಲಿ ಈ ಘಟನೆ ನಡೆದಿದ್ದು, ಝೋಮ್ಯಾಟೋ ಡೆಲಿವರಿ ಬಾಯ್ ಪನ್ವೇಲ್ ನಲ್ಲಿರುವ ಅಪಾರ್ಟ್ಮೆಂಟ್ ಒಂದಕ್ಕೆ ಆಹಾರ ವಿತರಣೆಗೆ ತೆರಳಿದ್ದಾನೆ. ಈ ವೇಳೆ ಆತ ಲಿಫ್ಟ್ ಏರಿದ್ದು, ನಿಗದಿಯಾಗಿದ್ದ ಫ್ಲೋರ್ ಬಂದಾಗ ಇಳಿಯಲು ಮುಂದಾಗಿದ್ದಾನೆ.

ಈ ಸಂದರ್ಭದಲ್ಲಿ ಅಪಾರ್ಟ್ಮೆಂಟ್ ನಿವಾಸಿಯೊಬ್ಬರು ತಮ್ಮ ನಾಯಿಯನ್ನು ಹಿಡಿದುಕೊಂಡು ಬಂದಿದ್ದು, ಏಕಾಏಕಿ ಅದು ಡೆಲಿವರಿ ಬಾಯ್ ಮೇಲೆ ದಾಳಿ ಮಾಡಿದೆ. ಇದರಿಂದ ಆತನಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...