ಚಿತ್ರದುರ್ಗ: ನಾಯಿ ದಾಳಿಗೆ 10 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ಚಿತ್ರದುರ್ಗದ ಮೆದೇಹಳ್ಳಿಯಲ್ಲಿ ನಡೆದಿದೆ.
10 ವರ್ಷದ ತರುಣ್ ಮೃತ ಬಾಲಕ. 15 ದಿನಗಳ ಹಿಂದೆ ತರುಣ್ ಗೆ ನಾಯಿ ಕಡಿದಿತ್ತು. ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕ ಇಂದು ಸಾವನ್ನಪ್ಪಿದ್ದಾನೆ.
ಚಿತ್ರದುರ್ಗ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು ಕೆಲ ದಿನಗಳ ಹಿಂದೆ ಕೊಪ್ಪಳದ ಕುಷ್ಟಗಿಯಲ್ಲಿಯೂ ಹುಚ್ಚು ನಾಯಿ ದಾಳಿಗೆ ಬಾಲಕ ಸೇರಿ ಹಲವರು ಗಾಯಗೊಂಡಿದ್ದರು. ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.