
ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಎಂದು ಆರ್.ಆರ್. ನಗರ ಪೊಲೀಸ್ ಠಾಣೆಗೆ ಹಾಜರಾಗಲಿದ್ದಾರೆ.
ದರ್ಶನ್ ನಿವಾಸದ ಬಳಿ ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ನೋಟಿಸ್ ಣಿಡಿದ ಮೂರು ದಿನಗಳೊಳಗೆ ಸಿಸಿ ಟಿವಿ ಫೂಟೇಜ್ ಸಹಿತ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದ್ದು, ಅಂತೆಯೇ ಇಂದು ಬೆಳಗ್ಗೆ 11:30 ವೇಳೆಗೆ ಆರ್.ಆರ್.ನಗರ ಠಾಣೆಗೆ ಹಾಜರಾಗಿ ದರ್ಶನ್ ಹೇಳಿಕೆ ನೀಡಲಿದ್ದಾರೆ ಎನ್ನಲಾಗಿದೆ.