
ಚಿಕ್ಕಮಗಳೂರು: ಬೀದಿ ನಾಯಿ ದಾಳಿಯಿಂದ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಎಂ.ಸಿ. ಹಳ್ಳಿಯಲ್ಲಿ ನಡೆದಿದೆ.
5 ವರ್ಷದ ಏಂಜೆಲಿನಾ ಗಾಯಗೊಂಡ ಬಾಲಕಿ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂ.ಸಿ. ಹಳ್ಳಿಯಲ್ಲಿ ಶಾಲೆಯಿಂದ ಮನೆಗೆ ಬರುವಾಗ ಬೀದಿ ನಾಯಿ ದಾಳಿ ಮಾಡಿದೆ. ಬಾಲಕಿಯ ತುಟಿಗೆ ಕಚ್ಚಿ ಗಾಯಗೊಳಿಸಿದೆ. ಗಾಯಾಳು ಬಾಲಕಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.