ಪ್ರಾಣಿ ಹಿಂಸೆಯ ಘಟನೆಯೊಂದರಲ್ಲಿ ಛತ್ತೀಸ್‌ಗಢದಲ್ಲಿ ಕುಡುಕರ ಗುಂಪೊಂದು ನಾಯಿಯನ್ನು ನೇಣು ಬಿಗಿದು ಸಾಯಿಸಿದೆ. ರಾಯ್‌ಪುರ ಪೊಲೀಸರಿಗೆ ಈ ದುಷ್ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದು ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಈ ಅಮಾನುಷ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಆರೋಪಿಗಳು ಅಮ್ಲಿದಿಹ್ ಪ್ರದೇಶದ ಮದ್ಯದ ಅಂಗಡಿಯ ಬಳಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಹಗ್ಗದಿಂದ ನಾಯಿಯನ್ನು ನೇಣು ಹಾಕಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದುಷ್ಕರ್ಮಿಗಳನ್ನು ಹಿಡಿಯಲು ಪೊಲೀಸರು ಸಮೀಪದ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಆದರೆ ಅವರನ್ನು ಇದುವರೆಗೆ ಗುರುತಿಸಲಾಗಿಲ್ಲ.
ನಾಯಿ ನಿರಂತರವಾಗಿ ಬೊಗಳುತ್ತಿದ್ದರಿಂದ ಸಿಟ್ಟಿಗೆದ್ದ ಆರೋಪಿಗಳು ಈ ಅಮಾನುಷ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಆರೋಪಿಗಳು ನಾಯಿಯ ಕುತ್ತಿಗೆಗೆ ನೇಣು ಬಿಗಿದಿದ್ದು ಅದರ ಕೈಕಾಲುಗಳನ್ನು ಕೂಡ ಕಟ್ಟಿದ್ದಾರೆ.