ರಾಮನಗರ: ನಿರ್ಜನ ಪ್ರದೇಶದಲ್ಲಿ ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದ ಸಾತನೂರು ರಸ್ತೆಯಲ್ಲಿ ನಡೆದಿದೆ.
ಬಳ್ಳಾರಿ ಮೂಲದ ಮೂವರು ಕಾರ್ಮಿಕರು ಸಾತನೂರು ಮುಖ್ಯರಸ್ತೆಯ ನಿರ್ಜನ ಪ್ರದೇಶದಲ್ಲಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದನ್ನು ನೋಡಿದ ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ. ಈ ವೇಳೆ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಸಿಕ್ಕಿಬಿದ್ದ ವ್ಯಕ್ತಿಯನ್ನು ಥಳಿಸಿದ ಸಾರ್ವಜನಿಕರು ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.