alex Certify 30 ರಹಸ್ಯ ಕಡತ ಅಕ್ರಮವಾಗಿ ಸಂಗ್ರಹಿಸಿದ್ದ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

30 ರಹಸ್ಯ ಕಡತ ಅಕ್ರಮವಾಗಿ ಸಂಗ್ರಹಿಸಿದ್ದ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅರೆಸ್ಟ್

ಮಿಯಾಮಿ: ಸರ್ಕಾರದ ದಾಖಲೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ರಕರಣದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಮತ್ತೆ ಬಂಧಿಸಲಾಗಿದೆ.

ಪ್ರಕರಣದ ಸಂಬಂಧ ಮಿಯಾಮಿ ಕೋರ್ಟ್ ಎದುರು ಡೊನಾಲ್ಡ್ ಟ್ರಂಪ್ ಶರಣಾಗಿದ್ದಾರೆ. ಈ ವೇಳೆ ಪೊಲೀಸರು ಟ್ರಂಪ್ ಅವರನ್ನು ಬಂಧಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ವಿರುದ್ಧ ಸರ್ಕಾರದ ದಾಖಲೆಗಳ ಅಕ್ರಮ ಸಂಗ್ರಹ ಆರೋಪ ಕೇಳಿ ಬಂದಿದೆ. 30ಕ್ಕೂ ಹೆಚ್ಚು ರಹಸ್ಯ ಕಡತಗಳನ್ನು ಅವರು ಅಕ್ರಮವಾಗಿ ತೆಗೆದುಕೊಂಡು ಹೋಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಯಾಮಿ ಕೋರ್ಟ್ ಡೊನಾಲ್ಡ್ ಟ್ರಂಪ್ ವಿಚಾರಣೆ ನಡೆಸಲಿದೆ. ಆರೋಪ ಸಾಬೀತದಲ್ಲಿ ಡೊನಾಲ್ಡ್ ಟ್ರಂಪ್ ಅವರಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

ಡೊನಾಲ್ಡ್ ಟ್ರಂಪ್ ಅವರು ವರ್ಗೀಕೃತ ದಾಖಲೆಗಳನ್ನು ತಪ್ಪಾಗಿ ನಿರ್ವಹಿಸಿದ ಆರೋಪಕ್ಕೆ ಸಂಬಂಧಿಸಿದ 37 ಆರೋಪಗಳಿಗೆ ನಿರ್ದೋಷಿ ಎಂದು ಒಪ್ಪಿಕೊಂಡಿದ್ದಾರೆ. ಟ್ರಂಪ್ ಅವರ ಸಹಾಯಕ ಮತ್ತು ಸಹ-ಪ್ರತಿವಾದಿ ವಾಲ್ಟ್ ನೌಟಾ ಅವರನ್ನು ಸಹ ಬಂಧಿಸಲಾಗಿದೆ.

ಮ್ಯಾಜಿಸ್ಟ್ರೇಟ್ ನ್ಯಾಯಾಧೀಶ ಜೊನಾಥನ್ ಗುಡ್‌ಮನ್ ಅವರು ಪ್ರಕರಣದ ಕುರಿತು ಟ್ರಂಪ್ ಅವರು ನೌಟಾ ಅವರೊಂದಿಗೆ ಸಂವಹನ ನಡೆಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...