ಬೆಂಗಳೂರು: ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ ಹಣ ಸಂಗ್ರಹಿಸುವ ಬಗ್ಗೆ ಹೊರಡಿಸಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ.
ಸಾರ್ವಜನಿಕರು ಮತ್ತು ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಆದೇಶ ವಾಪಸ್ ಪಡೆಯಲಾಗಿದೆ. ಶಿಕ್ಷಣ ಇಲಾಖೆ 100 ರೂಪಾಯಿ ಸಂಗ್ರಹಿಸುವ ಆದೇಶವನ್ನು ಹಿಂಪಡೆದುಕೊಂಡಿದೆ. 100 ರೂಪಾಯಿ ದೇಣಿಗೆ ಸಂಗ್ರಹಿಸಲು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿತ್ತು. ಶಿಕ್ಷಣ ಸಚಿವರ ಸೂಚನೆ ಮೇರೆಗೆ ಇಲಾಖೆಯ ಆಯುಕ್ತರು ಸುತ್ತೋಲೆ ಹಿಂಪಡೆದುಕೊಂಡಿದ್ದಾರೆ.