ಬೆಂಗಳೂರು : ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗಂಧೆಗಳು ಝೀಕಾ ವೈರಸ್ ಲಕ್ಷಣಗಳಾಗಿವೆ. ಇಂತಹ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ. ಆರೋಗ್ಯವಂತರಾಗಿರಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಇಜಿಪ್ತಿ ಸೊಳ್ಳೆಯಿಂದ ಝೀಕಾ ವೈರಸ್ ಹರಡುತ್ತದೆ. ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸೊಳ್ಳೆ ಉತ್ತಿಯಾಗದಂತೆ ತಡೆಯಬಹುದು.
ಲಕ್ಷಣಗಳು
ರೋಗ ಲಕ್ಷಣಗಳು
ಅತಿಯಾದ ತಲೆನೋವು
ಕೆಂಪಾದ ಕಣ್ಣು
ಜ್ವರ
ಮೈಯಲ್ಲಿ ಗಂಧೆಗಳು
ಸೋಂಕು ದೃಢಪಟ್ಟರೆ ಏನು ಮಾಡಬೇಕು?
• ರೋಗಲಕ್ಷಣಗಳಿಗೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಿ
• ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ವಿಶ್ರಾಂತಿ ಅಗತ್ಯ
• ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ
ಪದಾರ್ಥಗಳನ್ನು ಸೇವಿಸಬೇಕು
• ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರು ನೀಡುವ ಔಷಧವನ್ನು ಸೇವಿಸಿ
• ಸೋಂಕು ಬೇರೆಯವರಿಗೆ ಹರಡುವುದನ್ನು ತಪ್ಪಿಸಲು ಸೊಳ್ಳೆ ಪರದೆಯನ್ನು ಬಳಸಿ
ಮುಂಜಾಗ್ರತಾ ಕ್ರಮಗಳು
• ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು
• ಮನೆಯ ಸುತ್ತಮುತ್ತ ಸ್ವಚ್ಛವಾಗಿಡುವುದು
• ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು
• ಮನೆಯ ಪರಿಸರದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು
• ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು