ಬೆಂಗಳೂರು : ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್ ಎನ್ನದೇ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಸಿಬ್ಬಂದಿಗಳು ಹಣ ಪಡೆಯುತ್ತಿರುವ ಆರೋಪಗಳು ಕೇಳಿಬರುತ್ತಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹಾಗೂ ವಿಜಯಪುರ ಪಟ್ಟಣದಲ್ಲಿ ಗೃಹ ಲಕ್ಷ್ಮಿ ಅರ್ಜಿ ಸಲ್ಲಿಸಲು ಜನರಿಂದ ಸುಲಿಗೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಅರ್ಜಿ ಸಲ್ಲಿಸಲು ಬರುವವರಿಂದ 100 ರಿಂದ 300 ರೂಪಾಯಿ ಚಾರ್ಜ್ ಮಾಡಲಾಗುತ್ತಿದ್ದು, ಹಣ ಪಡೆಯದಂತೆ ಸರ್ಕಾರ ಆದೇಶ ಮಾಡಿದ್ರು ಕೂಲಿ ಕಾರ್ಮಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಪ್ರತಿನಿತ್ಯ ನೂರಾರು ಜನರಿಂದ ಸಿಬ್ಬಂದಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಮಹಿಳೆಯರಿಗೆ ಮಾಸಿಕ 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ಪಡೆದರೆ ಅಂತವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.ಗೃಹಲಕ್ಷ್ಮಿ ಯೋಜನೆ ನೋಂದಣಿ ಉಚಿತವಾಗಿದ್ದು, ಅರ್ಜಿ ಸಲ್ಲಿಕೆಗೆ ಯಾವುದೇ ಹಣ ನೀಡುವಂತಿಲ್ಲ. ಅರ್ಜಿಗೆ ಹಣ ಪಡೆದರೆ ಅಂತವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಹೇಳಿದರು.
ಜುಲೈ 19ರಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೆಲವೆಡೆ ಜನರಿಂದ ಹಣ ಪಡೆದು ಅರ್ಜಿ ಸಲ್ಲಿಕೆ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಹಣ ಪಡೆದರೆ ಕ್ರಿಮಿನಲ್ ಕೇಸ್ ಹಾಕಲಾಗುವುದು ಸಿಎಂ ಎಚ್ಚರಿಕೆ ನೀಡಿದ್ದಾರೆ.