ಬೆಂಗಳೂರು: ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನ ಪ್ರಶಾಂತ್ ಲೇಔಟ್ ನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾಗಿರುವ ಯುವತಿಯನ್ನು ಗೌತಮಿ ಎಂದು ಗುರುತಿಸಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನ ಪ್ರಶಾಂತ್ ಲೇಔಟ್ ನಲ್ಲಿ ಪಿಜಿಯಲ್ಲಿ ವಾಸವಾಗಿದ್ದ ಯುವತಿ ಟಿಸಿಎಸ್ ನಲ್ಲಿ ಕೆಲಸ ಮಾಡುತ್ತಿದ್ದಳು.
ಪೋಸ್ಟ್ ಮಾರ್ಟಮ್ ಮಾಡ್ಬೇಡಿ
ಯಾವುದೇ ಕಾರಣಕ್ಕೂ ನನ್ನ ದೇಹವನ್ನು ಪೋಸ್ಟ್ ಮಾರ್ಟಮ್ ಮಾಡ್ಬೇಡಿ ಹಾಗೂ ಈ ಬಗ್ಗೆ ತನಿಖೆ ನಡೆಸಬೇಡಿ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನನ್ನ ಮೃತದೇಹ ಹಸ್ತಾಂತರಿಸಿ ಎಂದು ಬರೆದಿಟ್ಟಿದ್ದಾಳೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.