ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಮತ್ತು ಜೀರ್ಣಕ್ರಿಯೆಯನ್ನು ಉತ್ತಮವಾಗಿಡುವ ಕೆಲವು ಹಣ್ಣುಗಳನ್ನು ತಪ್ಪದೆ ಸೇವಿಸಬೇಕು. ಅವುಗಳು ಯಾವುವು ಎಂದಿರೇ?
ದಾಳಿಂಬೆಯಲ್ಲಿ ಫೈಬರ್ ಮತ್ತು ಕಬ್ಬಿಣದ ಜೀವಸತ್ವಗಳು ಸಾಕಷ್ಟಿದ್ದು ಇದು ಕೊಲೆಸ್ಟ್ರಾಲ್, ರಕ್ತದೊತ್ತಡ ಮತ್ತು ಹೃದಾಯಾಘಾತದಂಥ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ.
ಪ್ಲಮ್, ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿ ಹೊಂದಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆ್ಯಪಲ್ ನಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಹೇರಳವಾಗಿದ್ದು ಇದು ದೇಹದಲ್ಲಿ ಹಿಮೋಗ್ಲೋಬಿನ್ ಮತ್ತು ಕಬ್ಬಿಣದ ಅಂಶವನ್ನು ಹೆಚ್ಚಿಸುತ್ತದೆ. ಚಳಿಗಾಲದಲ್ಲಿ ಇದನ್ನು ಸೇವಿಸುವುದರಿಂದ ಹಲವು ರೋಗಗಳಿಂದ ಮುಕ್ತಿ ಪಡೆಯಬಹುದು.
ವಿಟಮಿನ್ ಸಿ ಹೇರಳವಾಗಿರುವ ಕಿತ್ತಳೆ ಹಣ್ಣನ್ನು ತಪ್ಪದೆ ಸೇವಿಸಿ. ಇದರಿಂದ ಶೀತ ಮತ್ತು ಕೆಮ್ಮಿನ ಸಮಸ್ಯೆಗಳು ನಿಮ್ಮ ಹತ್ತಿರವೂ ಸುಳಿಯುವುದಿಲ್ಲ. ಪೇರಳೆ ಹಣ್ಣಿನಲ್ಲಿ ವಿಟಮಿನ್ ಸಿ ಇದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.