alex Certify ALERT : ‘ಝಿಕಾ ವೈರಸ್’ ಬಗ್ಗೆ ಆತಂಕ ಬೇಡ, ಇದನ್ನು ತಡೆಯಲು ನೀವು ಇಷ್ಟು ಮಾಡಿ ಸಾಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ‘ಝಿಕಾ ವೈರಸ್’ ಬಗ್ಗೆ ಆತಂಕ ಬೇಡ, ಇದನ್ನು ತಡೆಯಲು ನೀವು ಇಷ್ಟು ಮಾಡಿ ಸಾಕು

ಝಿಕಾ ವೈರಾಣು ಈಡಿಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಇದೇ ಸೊಳ್ಳೆಯು ಡೆಂಘಿ ಹಾಗೂ ಚಿಕನ್ಗುನ್ಯಾವನ್ನೂ ಹರಡುತ್ತದೆ. ಈಡಿಸ್ ಸೊಳ್ಳೆಯ ಸಂತಾನೋತ್ಪತ್ತಿ ತಡೆಗಟ್ಟಲು ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡಬೇಕು.

ಡೆಂಗ್ಯೂ, ಚಿಕೂನ್ ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು, ಜಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ.ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಸ್ವಚ್ಚ ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣಗಳು.

ಈಡಿಸ್ ಸೊಳ್ಳೆಗಳು ಕಚ್ಚುವಿಕೆಯಿಂದ ಪಾರಾಗುವುದು ಹೇಗೆ..?

1) ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು,
2) ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಡುವುದು.
3) ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು.
4) ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ನೀರು ನಿಲ್ಲದಂತೆ ಎಚ್ಚರವಹಿಸುವುದು.
5) ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸಿ
ಜಿಕಾ ವೈರಸ್ ಪತ್ತೆ ಹಚ್ಚುವ ವಿಧಾನ :

ರೋಗ ಲಕ್ಷಣಗಳು ಕಂಡು ಬಂದವರ ರಕ್ತದ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪತ್ತೆ ಹಚ್ಚಬಹುದು.

ಜಿಕಾ ವೈರಸ್ ಸೋಂಕು ದೃಢಪಟ್ಟಲ್ಲಿ ತೆಗೆದುಕೊಳ್ಳುವ ಕ್ರಮ 

> ಜಿಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿರುವುದಿಲ್ಲ.
> ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಪಡೆಯುವುದು.
>ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥಗಳನ್ನು ಬಳಸುವುದು.
>ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಿಗಳನ್ನು ಸೇವಿಸಬೇಕು ಪಡೆಯಬೇಕು. ಹಾಗೂ ರೋಗ ಲಕ್ಷಣಗಳು ಹೆಚ್ಚಾದರೆ ವೈದ್ಯಕೀಯ ಚಿಕಿತ್ಸೆ
>ಜಿಕಾ ವೈರಸ್ ಸೋಂಕಿತರು ಬೇರೆಯವರಿಗೆ ರೋಗ ಹರಡದಂತೆ ತಡೆಯಲು ಸೊಳ್ಳೆ ಪರದೆಯನ್ನು ಬಳಸುವುದು.

ಜಿಕಾ ವೈರಸ್ ಸೋಂಕಿನ ಲಕ್ಷಣಗಳು

ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು(ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ.
ಬಹುತೇಕ ಜಿಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2-7 ದಿನಗಳವರೆಗೆ ಇರುತ್ತದೆ.
ಕೀಲುಗಳಲ್ಲಿ ನೋವು
ಸ್ನಾಯುಗಳಲ್ಲಿ ನೋವು
ಗರ್ಭಾವಸ್ಥೆಯಲ್ಲಿ ಜಿಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ (ಮೈಕ್ರೋಸೆಫಾಲಿ ) ಬೆಳವಣಿಗೆ ದೋಷ ಕಂಡು ಬರಬಹುದು.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...