alex Certify ‘ಗೃಹಜ್ಯೋತಿ’ ಫಲಾನುಭವಿಗಳೇ ಚಿಂತಿಸ್ಬೇಡಿ : ಮನೆ ಬದಲಾಯಿಸುವುದಾದರೆ ಜಸ್ಟ್ ಹೀಗೆ ಮಾಡಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗೃಹಜ್ಯೋತಿ’ ಫಲಾನುಭವಿಗಳೇ ಚಿಂತಿಸ್ಬೇಡಿ : ಮನೆ ಬದಲಾಯಿಸುವುದಾದರೆ ಜಸ್ಟ್ ಹೀಗೆ ಮಾಡಿ.!

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿಯು ಜಾರಿಯಾಗಿ ಒಂದು ವರ್ಷ ಪೂರೈಸಿದೆ. ಇದೇ ಸಮಯದಲ್ಲಿ ಇಂಧನ ಇಲಾಖೆಯು ಗೃಹಜ್ಯೋತಿ ಗ್ರಾಹಕರಿಗಾಗಿ ಮನೆ ಬದಲಾಯಿಸಿದ ನಂತರವೂ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಿದೆ.

ಹಳೆ ಮನೆಯ ಆರ್ಆರ್ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಹೊಸ ಮನೆಯ ಸಂಖ್ಯೆಯನ್ನು ಲಿಂಕ್ ಮಾಡುವ ಮೂಲಕ ಗೃಹಜ್ಯೋತಿ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.ಸೇವಾ ಸಿಂಧು ಪೋರ್ಟಲ್ನ https://sevasindhu.karnataka.gov.in/…/GetAadhaarData.aspx ವೆಬ್ಸೈಟ್ ಪ್ರವೇಶಿಸಿ ಆರ್ಆರ್ ಸಂಖ್ಯೆಯನ್ನು ಡಿ-ಲಿಂಕ್ ಮಾಡಬಹುದು. ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಮಾಡಿ ಸೇವೆ ಪಡೆಯಬಹುದು.

ಮನೆ ಬದಲಾಯಿಸುವಾಗ ಈ ಹಿಂದೆ ಆ ಮನೆಯಲ್ಲಿ ವಾಸವಿದ್ದವರ ಆಧಾರ್ ಸಂಖ್ಯೆ ಜೊತೆ ಆರ್ಆರ್ ನಂಬರ್ ಲಿಂಕ್ ಆಗಿದೆಯೇ ಅಥವಾ ಅವರು ಡಿ-ಲಿಂಕ್ ಮಾಡಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ಆಗಿರದಿದ್ದರೆ ಡಿ-ಲಿಂಕ್ ಮಾಡಿ, ಹೊಸದಾಗಿ ಆರ್ಆರ್ ನಂಬರ್ಗೆ ಆಧಾರ್ ಲಿಂಕ್ ಮಾಡಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...