ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ನಿಯಮಿತವಾಗಿ ಹಣ ಪಾವತಿಯಾಗದಿರುವ ಬಗ್ಗೆ ಹಲವಾರು ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕೆ ಹಣ ಹಾಕಲು ಸರ್ಕಾರ ನಿರ್ಧರಿಸಿದೆ.
ಹೌದು. ಈವರೆಗೆ ನಡೆದಿರುವ ಚರ್ಚೆಯ ಪ್ರಕಾರ ಪ್ರತಿ ತಿಂಗಳ 15-20ನೇ ತಾರೀಖಿನ ಒಳಗಡೆ ಎಲ್ಲ ಮಹಿಳಾ ಫಲಾನುಭವಿಗಳ ಖಾತೆಗೂ ಗೃಹಲಕ್ಷ್ಮಿ ಯೋಜನೆ ಹಣ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಅರ್ಹರಾಗಿದ್ದರು ಯೋಜನೆ ಹಣ ಪಡೆಯಲಾಗದೆ ವಂಚಿತರಾಗಿದ್ದರೆ ಅವರ ಮನೆ ಬಾಗಿಲೆಗಳಿಗೆ ಹೋಗಿ ಸರ್ವೆ ನಡೆಸಿ ಇಲಾಖೆಯ ಸಿಬ್ಬಂದಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಮಸ್ಯೆ ಬಗ್ಗೆ ಹರಿಸಲಿದ್ದಾರೆ ಎನ್ನುವುದನ್ನು ಕೂಡ ತಿಳಿಸಿದ್ದಾರೆ. ರ್ಕಾರವು ಹಣ ಬಿಡುಗಡೆ ಮಾಡಿ ಫಲಾನುಭವಿಗಳು ಹಣ ಪಡೆಯುವವರೆಗೂ 25 ದಿನಗಳು ಸಮಯವಾಗುತ್ತಿತ್ತು. ಈಗ ಅದನ್ನು ಇನ್ನಷ್ಟು ಶೀಘ್ರವಾಗಿ ಮುಗಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು.
ಕೆಲವರಿಗೆ ಇನ್ನೂ ಮೊದಲನೇ ಕಂತಿನ ಹಣ ಕೂಡ ಜಮಾ ಆಗಿಲ್ಲ. ಈ ಹಿನ್ನೆಲೆಯಲ್ಲಿ ಸಾಕಷ್ಟು ಜನ ತಮ್ಮ ಖಾತೆಗೆ ಯಾವಾಗ ಹಣ ಬರುತ್ತದೆ ಎಂದು ತಲೆ ಕೆಡಿಸಿಕೊಳ್ಳುತ್ತಿದ್ದಾರೆ.ಸರ್ಕಾರ ಈಗಾಗಲೇ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯ ಹಣ 15 ರಿಂದ 20ನೇ ತಾರೀಖಿನ ಒಳಗೆ ಖಾತೆಗೆ ನೇರವಾಗಿ ಜಮಾ ಆಗಲಿದೆ.