ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹಲವು ಫಲಾನುಭವಿಗಳ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಆಗಸ್ಟ್ ತಿಂಗಳಿನಲ್ಲಿ ಮೊದಲನೇ ಕಂತಿನ ಹಣ ಬಿಡುಗಡೆ ಆಗಿದ್ದು ಎರಡನೇ ಕಂತಿನ ಹಣ ಪಡೆಯಲು ಮಹಿಳೆಯರು ಕಾಯುತ್ತಿದ್ದಾರೆ.
ಆದರೆ ಇನ್ನೂ ಕೆಲವು ಮಹಿಳೆಯರಿಗೆ ಮೊದಲನೇ ಕಂತಿನ ಹಣ ಬಂದಿಲ್ಲ. ಹಣ ಬಂದಿಲ್ಲ ಎಂದಾದರೆ ಮಹಿಳೆಯರು ತಪ್ಪದೇ ಈ ಕೆಲಸ ಮಾಡಬೇಕು. ಆಗ ಎರಡೂ ಕಂತಿನ ಹಣ ಒಟ್ಟಿಗೆ ಬರುತ್ತದೆ.
ಮಹಿಳೆಯರು ತಮ್ಮ ಖಾತೆಗಳಿಗೆ ಆಧಾರ್ ಲಿಂಕ್ ಆಗಿಲ್ಲ ಎಂದರೆ ಅಥವಾ ಆಧಾರ್ ಲಿಂಕ್ ಆಗಿದ್ದರು ಆ ಖಾತೆ ಆಕ್ಟಿವ್ ಆಗಿಲ್ಲ ಎಂದರೆ ಇದನ್ನು ಸರಿಪಡಿಸಿಕೊಳ್ಳಬೇಕು.ಇ-ಕೆವೈಸಿ ಮಾಡದ ಕಾರ್ಡ್ಗಳಿಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ ಹೀಗಾಗಿ ಹತ್ತಿರದಲ್ಲಿರುವ ಯಾವುದೇ ಸೇವಾಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ದಾಖಲೆಯನ್ನು ಕೊಟ್ಟು ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ.
ಆಧಾರ್ ಲಿಂಕ್ ಆದ ಬ್ಯಾಂಕ್ ಖಾತೆ ಆಕ್ಟಿವ್ ಆಗಿದೆಯೇ ಎನ್ನುವುದನ್ನು ನೀವು ಚೆಕ್ ಮಾಡಿಕೊಳ್ಳಬೇಕು. ಒಂದು ವೇಳೆ ಆ ಖಾತೆ Inactive ಆಗಿದ್ರೆ ಅದಕ್ಕೆ ಹಣ ಹಾಕಿ ಅದನ್ನು ಸಕ್ರಿಯ ಮಾಡಿಕೊಳ್ಳಿ. ಖಾತೆ ಸಕ್ರಿಯವಾಗಿಲ್ಲದಿದ್ದರೆ ಹಣ ಹಾಕುವುದಕ್ಕೆ ಸಮಸ್ಯೆ ಆಗುತ್ತದೆ.
ನಿಮ್ಮ ಬ್ಯಾಂಕ್ ಖಾತೆ ಹೆಸರು, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಈ ಎಲ್ಲಾ ದಾಖಲೆಗಳಲ್ಲೂ ಕೂಡ ನಿಮ್ಮ ಹೆಸರು ಸರಿಯಾಗಿದೆಯೇ ಎನ್ನುವುದನ್ನು ದೃಢಪಡಿಸಿಕೊಳ್ಳಬೇಕು. ಒಂದು ವೇಳೆ ಏನಾದರೂ ಹೆಸರಿನಲ್ಲಿ ವ್ಯತ್ಯಾಸ, ದೋಷವಿದ್ರೆ ಹಣ ಬರಲ್ಲ. ಆದ್ದರಿಂದ ಇದನ್ನು ನೀವು ಸರಿಪಡಿಸಿಕೊಳ್ಳಬೇಕು.
ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಕೊಂಡಿರುವ ಫಲಾನುಭವಿಗಳಲ್ಲಿ ಯಾರಿಗೆ ಮೊದಲ ಕಂತಿನ ಹಣ ಬಂದಿಲ್ಲ ಅಂತಹವರು ತಮ್ಮ ಬ್ಯಾಂಕ್ಗಳಲ್ಲಿ ಇ-ಕೆವೈಸಿ ಹಾಗೂ ಆಧಾರ್ ಜೋಡಣೆ ಮಾಡಿಕೊಂಡರೆ ಯೋಜನೆ ಹಣ ಜಮಾ ಆಗಲಿದೆ.
ನಿಮ್ಮ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ವಿವರದಲ್ಲಿ ಮಾಹಿತಿಗಳು ಹೊಂದಾಣಿಕೆ ಆಗಿರಬೇಕು, ಅಥವಾ ಹೆಸರುಗಳಲ್ಲಿ ಏನಾದರೂ ತಪ್ಪಾಗಿದ್ದರೆ ಬೇಗನೇ ಸರಿಪಡಿಸಿಕೊಳ್ಳಿ.ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆ ಎನ್ನುವುದನ್ನು ದೃಢಪಡಿಸಿಕೊಳ್ಳಿ. ಆಧಾರ್ ಲಿಂಕ್ ಮಾತ್ರವಲ್ಲ ಸೀಡಿಂಗ್ ಆಗಿ NPCI ಮ್ಯಾಪಿಂಗ್ ಕೂಡ ಆಗಿರಬೇಕು.
ಮಹಿಳೆಯರು 8147500500 ಈ ಸಂಖ್ಯೆಗೆ ತಮ್ಮ ಪಡಿತರ ಚೀಟಿ ಸಂಖ್ಯೆಯನ್ನು ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯಿಂದ ಕಳುಹಿಸುವ ಮೂಲಕ ತಮ್ಮ ಅರ್ಜಿ ಸಲ್ಲಿಕೆ ಸ್ಥಿತಿ ಏನಾಗಿದೆ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.