ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ನೀಡಿದ್ದಾರೆ ದಾವಣಗೆರೆ ಜಿಲ್ಲೆ ನ್ಯಾಮತಿ ಸುರಹೊನ್ನೆಯಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಜನವರಿಯಿಂದ ರಾಜ್ಯಾದ್ಯಂತ ಮನೆಬಾಗಿಲಿಗೆ ಪಡಿತರ ಪೂರೈಸುವುದಾಗಿ ಘೋಷಣೆ ಮಾಡಿದ್ದಾರೆ.
ಸಾಮಾಜಿಕ ಭದ್ರತೆ ಯೋಜನೆ ಪ್ರತಿ ಮನೆಗೆ ತಲುಪಬೇಕು. ಇದಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ ನಲ್ಲಿ ಪ್ರಾಯೋಗಿಕ ಕಾರ್ಯಕ್ರಮ ಜಾರಿಯಾಗಲಿದ್ದು, ಸೌಲಭ್ಯಗಳನ್ನು ಗ್ರಾಮೀಣ ಜನರ ಮನೆ ಬಾಗಿಲಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.