ನವದೆಹಲಿ: ಕೊರೋನಾ ಲಸಿಕೆ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸಲು ಮುಂದಾಗಿದ್ದು, ಮುಂದಿನ ತಿಂಗಳಿನಿಂದ ಮನೆಬಾಗಿಲಿಗೆ ಲಸಿಕೆ ಪೂರೈಕೆ ಮಾಡಲಾಗುತ್ತದೆ.
ದೇಶದಲ್ಲಿ 100 ಕೋಟಿ ಲಸಿಕೆ ನೀಡುವುದರೊಂದಿಗೆ ಸಾಧನೆ ಮಾಡಲಾಗಿದ್ದು, ಮುಂದಿನ ತಿಂಗಳಿನಿಂದ ಮನೆಮನೆಗೆ ತೆರಳಿ ಲಸಿಕೆ ನೀಡಲಾಗುವುದು. ‘ಹರ್ ಘರ್ ದಸ್ತಕ್’ ಅಭಿಯಾನಕ್ಕೆ ಚಾಲನೆ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಎರಡನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ ಹೆಚ್ಚಾಗಿರುವುದರಿಂದ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಅವರು ಬುಧವಾರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ದೇಶದಲ್ಲಿ ಶೇಕಡ 77 ರಷ್ಟು ಜನ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಶೇಕಡ 32 ರಷ್ಟು ಜನ ಮಾತ್ರ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಸುಮಾರು 10 ಕೋಟಿಗೂ ಅಧಿಕ ಮಂದಿ 2 ನೇ ಡೋಸ್ ಲಸಿಕೆಯನ್ನು ಪಡೆಯದ ಹಿನ್ನೆಲೆಯಲ್ಲಿ ‘ಹರ್ ಘರ್ ದಸ್ತಕ್’ ಅಭಿಯಾನದ ಮೂಲಕ ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುವುದು.