
ಬೆಂಗಳೂರು: ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಹೆಚ್.ಎಸ್. ದೊರೆಸ್ವಾಮಿ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಅಂತಿಮ ನಮನ ಸಲ್ಲಿಸಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯ ಟಿ.ಆರ್. ಮಿಲ್ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದೆ. ಅಂತಿಮ ವಿಧಾನಗಳನ್ನು ದೊರೆಸ್ವಾಮಿಯವರ ಪುತ್ರ ರಾಜು ನೆರವೇರಿಸಿದ್ದಾರೆ. ಹೃದಯಾಘಾತದಿಂದಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೆಚ್.ಎಸ್. ದೊರೆಸ್ವಾಮಿ ವಿಧಿವಶರಾಗಿದ್ದರು.