ಬೆಂಗಳೂರು: ಉಸಿರಾಟ ತೊಂದರೆಯಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಸ್ವಾತಂತ್ರ್ಯ ಹೋರಾಟಗಾರರ ಹೆಚ್.ಎಸ್. ದೊರೆಸ್ವಾಮಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದ ನಂತರದಲ್ಲಿ ಅಸ್ವಸ್ಥತೆ, ನಿಶ್ಯಕ್ತಿ ಕಾಣಿಸಿಕೊಂಡಿದೆ. ಹೀಗಾಗಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ನೇತೃತ್ವದ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಲಾಗಿದೆ. ಕಳೆದ ತಿಂಗಳು ದೊರೆಸ್ವಾಮಿಯವರು 104 ನೇ ಜನ್ಮದಿನದ ಆಚರಿಸಿಕೊಂಡಿದ್ದರು.