alex Certify BIG NEWS: ಬೂಸ್ಟರ್ ಡೋಸ್ ಅಂತರ 6 ತಿಂಗಳಿಗೆ ಇಳಿಕೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೂಸ್ಟರ್ ಡೋಸ್ ಅಂತರ 6 ತಿಂಗಳಿಗೆ ಇಳಿಕೆ ಸಾಧ್ಯತೆ

ನವದೆಹಲಿ: ಕೊರೋನಾ ಮತ್ತೆ ಏರುಗತಿಯಲ್ಲಿ ಸಾಗುತ್ತಿದ್ದು, ಇದೇ ಸಂದರ್ಭದಲ್ಲಿ ಬೂಸ್ಟರ್ ಡೋಸ್ ಅಂತರವನ್ನು ಆರು ತಿಂಗಳಿಗೆ ಇಳಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ.

ಕೋವಿಡ್ ಲಸಿಕೆಯ ಎರಡನೇ ಡೋಸ್ ಮತ್ತು ಮುಂಜಾಗ್ರತೆ ಡೋಸ್ ನಡುವಿನ ಅಂತರವನ್ನು 9 ತಿಂಗಳಿನಿಂದ 6 ತಿಂಗಳಿಗೆ ಇಳಿಕೆ ಮಾಡಲಾಗುವುದು. ಲಸಿಕೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಏಪ್ರಿಲ್ 29 ರಂದು ನಡೆಯಲಿರುವ ಸಭೆಯಲ್ಲಿ ಲಸಿಕೆ ನಡುವಿನ ಅಂತರವನ್ನು ಕಡಿಮೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಕೊರೋನಾ ಲಸಿಕೆಯ 2 ಡೋಸ್ ಪಡೆದ 6 ತಿಂಗಳ ನಂತರ ಮನುಷ್ಯನ ದೇಹದಲ್ಲಿ ಪ್ರತಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಹೀಗಾಗಿ ಬೂಸ್ಟರ್ ಡೋಸ್ ನೀಡಲಾಗುತ್ತಿದ್ದು, 9 ತಿಂಗಳ ಬದಲಿಗೆ 6 ತಿಂಗಳಿಗೆ ಇಳಿಕೆ ಮಾಡಲು ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...