ನವದೆಹಲಿ: ಅನೇಕ ದೇಶಗಳಲ್ಲಿ ಕೊರೋನಾ ಪ್ರಕರಣಗಳು ಮತ್ತೆ ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ವಯಸ್ಕರಿಗೆ ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟವರಿಗೆ ಮಾತ್ರ ಸದ್ಯ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಕೆಲವು ದೇಶಗಳಿಗೆ ಪ್ರಯಾಣಿಸಲು ಬೂಸ್ಟರ್ ಡೋಸ್ ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಅರ್ಹ ವಯಸ್ಕರಿಗೆ ಉಚಿತವಾಗಿ ಬೂಸ್ಟರ್ ಡೋಸ್ ನೀಡುವ ಬಗ್ಗೆ ಸರ್ಕಾರ ಚರ್ಚೆ ನಡೆಸಿದೆ. ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.