ನವದೆಹಲಿ: 12 ರಿಂದ 14 ವರ್ಷದ ಮಕ್ಕಳಿಗೆ ಮಾರ್ಚ್ 16 ರಿಂದ ಕೋವಿಡ್ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. ಕೋರ್ಬೆ ವ್ಯಾಕ್ಸ್ ಲಸಿಕೆಯನ್ನು ಮಕ್ಕಳಿಗೆ ನೀಡಲಾಗುವುದು. ಇದಲ್ಲದೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಸರ್ಕಾರ ಹೇಳಿದೆ.
ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯಾ ಅವರು ದೇಶದ 7.11 ಕೋಟಿ ಮಕ್ಕಳಿಗೆ ಕೋರ್ಬೆ ವ್ಯಾಕ್ಸ್ ಲಸಿಕೆ ನೀಡಲಾಗುತ್ತದೆ. ಇದರೊಂದಿಗೆ ಪೂರ್ವ ರೋಗಗಳಿಂದ 60 ವರ್ಷ ಮೇಲ್ಪಟ್ಟ ಹಿರಿಯರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.