
ಬೆಂಗಳೂರು: ರಾಜ್ಯದಲ್ಲಿ ಕೊರೋನಾ, ಒಮಿಕ್ರಾನ್ ಸೋಂಕು ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಶಾಲಾ ಮಕ್ಕಳ ಪೋಷಕರು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು.
ಆರೋಗ್ಯ ಕಾರ್ಯಕರ್ತರು, 65 ವರ್ಷ ಮೇಲ್ಪಟ್ಟವರು ಇತರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಟೆಸ್ಟಿಂಗ್ ಮಾಡಲಾಗುವುದು. ಸಿನಿಮಾ ಮಂದಿರ. ಮಾಲ್ ಪ್ರವೇಶಕ್ಕೆ 2 ಡೋಸ್ ಲಸಿಕೆ ಕಡ್ಡಾಯವಾಗಿದೆ. ಅದೇ ರೀತಿ ಎಲ್ಲಾ ಸರ್ಕಾರಿ ಸಿಬ್ಬಂದಿ 2 ಡೋಸ್ ಲಸಿಕೆ ಪಡೆದಿದಬೇಕು. ಪೋಷಕರು ಎರಡು ಡೋಸ್ ಪಡೆದಿದ್ರೆ ಮಕ್ಕಳಿಗೆ ಶಾಲೆಗೆ ಪ್ರವೇಶ ನೀಡಲಾಗುವುದು ಎಂದು ಹೇಳಲಾಗಿದೆ.