ಬೆಂಗಳೂರು: ಸಾರಿಗೆ ನಿಗಮಗಳಿಗೆ ತೆರಿಗೆ ವಿನಾಯಿತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಶಕ್ತಿ ಯೋಜನೆಯಿಂದ ನಿಗಮಗಳಿಗೆ ಉಂಟಾಗಿರುವ ಹೊರೆ ಇಳಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗಳು 2023- 24ನೇ ಸಾಲಿನಲ್ಲಿ ಸರ್ಕಾರಕ್ಕೆ ಪಾವತಿಸಬೇಕಿರುವ 581.47 ಕೋಟಿ ರೂಪಾಯಿ ವಾಹನ ತೆರಿಗೆ ವಿನಾಯಿತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಅಲ್ಲದೇ ಬೆಂಗಳೂರಿನಲ್ಲಿ ಹವಾ ನಿಯಂತ್ರಿತ ಡಬಲ್ ಡೆಕ್ಕರ್ ಬಸ್ ಗಳನ್ನು ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ ಅಡಿ ಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಂಗಳೂರಲ್ಲಿ ಮತ್ತೆ ಡಬ್ಬಲ್ ಡೆಕ್ಕರ್ ಬಸ್ ಗಳ ಸಂಚಾರ ಆರಂಭವಾಗಲಿದೆ.