ಬೆಂಗಳೂರು: ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಡಬಲ್ ಡೆಕ್ಕರ್ ರೈಲುಗಳು ಸೇರ್ಪಡೆಯಾಗಲಿದೆ. ಮೂರು ಹಂತದಲ್ಲಿ ಮೇಲ್ಸೇತುವೆ ಯೋಜನೆ ವಿನ್ಯಾಸ ರೂಪಿಸಲು ಚಿಂತನೆ ನಡೆದಿದ್ದು, ಟೆಂಡರ್ ಆಹ್ವಾನಿಸಲಾಗಿದೆ.
ಡಬಲ್ ಡೆಕ್ಕರ್ ಯೋಜನೆಗಾಗಿ ಈಗಾಗಲೇ ಜಿಯೋ ಟೆಕ್ನಿಕಲ್ ಸರ್ವೆ ನಡೆಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ಈಗ ಎತ್ತರಿಸಿದ ಮಾರ್ಗ, ನಿಲ್ದಾಣಗಳ ವಿನ್ಯಾಸ ರೂಪಿಸಲು ಮುಂದಾಗಿದೆ.
ಜೆಪಿ ನಗರದ ನಾಲ್ಕನೇ ಹಂತದಿಂದ ಕೆಂಪಾಪುರವರೆಗೆ, ಹೊಸಹಳ್ಳಿಯಿಂದ ಕಡಬಗೆರೆವರೆಗೆ ಸೇರಿ ಎರಡು ಕಾರಿಡಾರ್ ಗಳನ್ನು ಮೂರನೇ ಹಂತದ ಮೆಟ್ರೋ ರೈಲು ಯೋಜನೆ ಒಳಗೊಂಡಿದೆ.
ಆಗಸ್ಟ್ ನಲ್ಲಿ ಕೇಂದ್ರ ಸರ್ಕಾರ 15,611 ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಅನುಮತಿ ನೀಡಿದ ಬಳಿಕ ಯೋಜನೆ ಅನುಷ್ಠಾನ ಪ್ರಕ್ರಿಯೆ ಚುರುಕುಗೊಂಡಿದೆ. 3ಹಂತದಲ್ಲಿ ಡಬಲ್ ಡೆಕ್ಕರ್ ಯೋಜನೆ ವಿನ್ಯಾಸಕ್ಕೆ ಟೆಂಡರ್ ಕರೆಯಲಾಗಿದೆ.