alex Certify BREAKING: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಟೆಕ್ಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಟೆಕ್ಕಿ

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಪೂಜಾ(22) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಪೂಜಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ತೆಗ್ಗಿ ಬಸಾಪುರ ನಿವಾಸಿಯಾಗಿರುವ ಪೂಜಾ ಅವರ ಪತಿ ಸುನಿಲ್ ಮತ್ತು ಮೈದುನನ ವಿರುದ್ಧ ಕಿರುಕುಳದ ಆರೋಪ ಕೇಳಿ ಬಂದಿದೆ. ಗಂಗಮ್ಮನ ಗುಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.

ಎರಡು ವರ್ಷದ ಹಿಂದೆಯಷ್ಟೇ ಪೂಜಾ –ಸುನಿಲ್ ಮದುವೆಯಾಗಿದ್ದರು. ಇಬ್ಬರೂ ಎಂಬಿಎ ಪದವೀಧರರಾಗಿದ್ದು, ಪತಿ, ಮೈದುನನ ಕಿರುಕುಳದಿಂದ ಪೂಜಾ ನೇಣಿಗೆ ಶರಣಾಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...