
ಬೆಂಗಳೂರು: ಅಧಿಕೃತವಾಗಿ ಇನ್ನೆರಡು ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ.
ಯಡಿಯೂರಪ್ಪನವರ ಜೊತೆಗೆ ಚರ್ಚೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ಎಂದರೇನೇ ರಾಜಕೀಯ. ಆದರೆ, ನಾನು ರಾಜಕೀಯ ಮಾಡುವುದಿಲ್ಲ. ಚುನಾವಣೆಗೆ ನಿಂತ ಮೇಲೆ ಎಲ್ಲವೂ ಬಂದೇ ಬರುತ್ತದೆ. ಮೋದಿ ಅವರ ಜನಪ್ರಿಯತೆ, ಯಡಿಯೂರಪ್ಪ ನಾಯಕತ್ವ, ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಸಲಹೆಯಂತೆ ಕೆಲಸ ಮಾಡುತ್ತೇನೆ. ಎಲ್ಲಾ ರೀತಿಯಲ್ಲಿ ಚುನಾವಣೆ ಎದುರಿಸಲು ನಾನು ಸಿದ್ಧವಾಗಿದ್ದೇನೆ ಚುನಾವಣೆಗೆ ನಾನು ರೆಡಿಯಾಗಿದ್ದೇನೆ ಎಂದು ಡಾ. ಮಂಜುನಾಥ್ ಹೇಳಿದ್ದಾರೆ.
ಬಿಜೆಪಿ ಸೇರಲಿರುವ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.