ಬೆಂಗಳೂರು: ರಾಜ್ಯದ ಗಮನ ಸೆಳೆದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ 26 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಗೆ ಹಿನ್ನಡೆಯಾಗಿದೆ. ಆರಂಭಿಕವಾಗಿ ಅಂಚೆ ಮತಗಳ ಎಣಿಕೆ ನಡೆಸಿದ್ದು, ನಂತರ ಇವಿಎಂ ಮತಗಳ ಎಣಿಕೆ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿ ಡಾ. ಮಂಜುನಾಥ್ ಮುನ್ನಡೆ ಗಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಬಿ.ಎನ್. ಚಂದ್ರಪ್ಪ 1020 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ ಮುನ್ನಡೆಯಲ್ಲಿದ್ದಾರೆ.
ಉತ್ತರ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮುನ್ನಡೆ ಗಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ 4 ಸಾವಿರ ಮತಗಳಿಂದ ಮುನ್ನಡೆ ಗಳಿಸಿದ್ದಾರೆ.