
ಬೆಂಗಳೂರು: ಪಿಎಸ್ಐ, ಸಿಟಿಐ ಪರಿಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಟಲಿಜನ್ಸ್ ವಿಭಾಗದ ಸಬ್ ಇನ್ಸ್ ಪೆಕ್ಟರ್ ಲಿಂಗಯ್ಯನನ್ನು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಪೊಲಿಸರು ತನಿಖೆ ಮುಂದುವರೆಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪ್ರಕರಣ ಸಂಬಂಧ ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮಾಹಿತಿ ಕಲೆಹಾಕುವಾಗ ಆಡಿಯೋ ಬೆಳಕಿಗೆ ಬಂದಿದೆ. ಮಾಹಿತಿ ಕಲೆ ಹಾಕಲು ಫೇಕ್ ಆಡಿಯೋ ಮಾಡಿದ್ದೆ ಎಂದು ಪಿಎಸ್ಐ ಲಿಂಗಯ್ಯ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ. ಸತ್ಯಾಸತ್ಯತೆ ತನಿಖೆ ಬಳಿಕ ಗೊತ್ತಾಗುತ್ತದೆ ಎಂದರು.
ಇನ್ನು ಸಾಕಷ್ಟು ಮುಂಜಾಗೃತಾ ಕ್ರಮ ಕೈಗೊಂಡು ಪಿಎಸ್ಐ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.