
ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೋರಿ ಕೊಡವ ಸಮುದಾಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದೆ. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ನಮ್ಮ ಕೊಡಗು ಮೂಲದ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ರಶ್ಮಿಕಾ ಮಂದಣ್ಣಗೆ ಭದ್ರತೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅಂತಹ ಯಾವುದೇ ಪತ್ರ ಈವರೆಗೆ ಬಂದಿಲ್ಲ ಎಂದು ತಿಳಿಸಿದ್ದಾರೆ.
ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಯಾವುದೇ ಪತ್ರ ಬಂದಿಲ್ಲ. ಈ ಬಗ್ಗೆ ಕಚೇರಿಯಲ್ಲಿ ವಿಚಾರಿಸುತ್ತೇನೆ ಎಂದಿದ್ದಾರೆ.
ಇತ್ತೀಚೆಗೆ ಶಾಸಕ ರವಿ ಗಣಿಗ, ರಶ್ಮಿಕಾ ಮಂದಣ್ಣ ವಿರುದ್ಧ ಕಿಡಿಕಾರಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಕೊಡವ ನ್ಯಾಷನಲ್ ಕೌನ್ಸಿಲ್ ನಟಿಯ ಪರ ನಿಂತಿದೆ.