ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಯಾವುದೇ ಪುರಾವೆಗಳಿಲ್ಲ. ಇದನ್ನು ಕೋರ್ಟ್ ಕೂಡ ಒಪ್ಪಲ್ಲ ಎಂದು ನಂಬಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಮುಡಾ ವಿಚಾರ ಮುಂದಿಟ್ಟುಕೊಂಡು ಬಿಜೆಪಿಯವರು ರಾಷ್ಟ್ರಮಟ್ಟದಲ್ಲಿ ಹೋರಾಟ ಮಾಡುವುದಾದರೆ ನಾವು ಕೂಡ ರಾಷ್ಟ್ರ ಮಟ್ಟದಲ್ಲಿಯೇ ಹೋರಾಡುತ್ತೇವೆ. ಇಂಡಿಯಾ ಮೈತ್ರಿಕೂಟದ ಜೊತೆ ಸೇರಿ ಹೋರಾಟ ಮಾಡಬೇಕಾ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದರು.
ರಾಜ್ಯಪಾಲರ ನಡೆಯ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ. ಪ್ರತಿಭಟನೆಗೆ ಮಣಿಯುವುದು, ಬಿಡುವುದು ನಂತರದ ವಿಚಾರ. ಪ್ರತಿಭಟನೆಯ ವೇಳೆ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು, ಸಂಸದರು ರಾಜ್ಯಪಾಲರಿಗೆ ಮನವಿ ಮಾಡಲು ನಿರ್ಧರಿಸಿದ್ದೇವೆ ಎಂದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ. ಸಹಿಯಿಲ್ಲ, ಆದೇಶವಿಲ್ಲ, ನೋಂದಣಿಯಲ್ಲಿಯೂ ಅವರ ಹೆಸರಿಲ್ಲ. ಹಾಗಾಗಿ ಪ್ರಾಸಿಕ್ಯೂಷನ್ ಅನುಮತಿ ವಿಚಾರದಲ್ಲಿ ನಾಳೆ ಕೋರ್ಟ್ ಇದನ್ನು ಪರಿಗಣಿಸಲ್ಲ ಎಂದು ಹೇಳಿದರು.