ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಬಂಧಿಸಲಾಗಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಿಜೆಪಿಯವರು ಹೇಳಿದಾಕ್ಷಣ ಅರೆಸ್ಟ್ ಮಾಡಲು ಆಗಲ್ಲ. ಎಫ್ ಎಸ್ ಎಲ್ ವರದಿ ಬಂದ ಬಳಿಕ ಖಚಿತವಾಗಲಿದೆ ಎಂದು ಹೇಳಿದ್ದೆವು. ಅದರಂತೆ ಈಗ ಕ್ರಮ ಕೈಗೊಳ್ಳಲಾಗಿದೆ.
ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಂಡಿದ್ದೇವೆ. ಇದರಲ್ಲಿ ಸರ್ಕಾರಕ್ಕೆ ಮುಜುಗರ ಪ್ರಶ್ನೆ ಏನು ಬಂತು? ಕಾಂಗ್ರೆಸ್ ನವರು ಏನೂ ಮಾಡಲ್ಲ ಎನ್ನುತ್ತಿದ್ದ ಬಿಜೆಪಿ ನಾಯಕರು ಈಗ ಏನು ಹೇಳ್ತಾರೆ? ಎಂದು ಪ್ರಶ್ನಿಸಿದ್ದಾರೆ.