alex Certify BIG NEWS: ವರ್ಗಾವಣೆ ದಂಧೆ ಆಗಿದ್ದರೆ ಅಧಿವೇಶನದಲ್ಲಿ ಪ್ರಸ್ತಾಪಿಸಲಿ; ವಿಪಕ್ಷಗಳಿಗೆ ಗೃಹ ಸಚಿವ ಪರಮೇಶ್ವರ್ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರ್ಗಾವಣೆ ದಂಧೆ ಆಗಿದ್ದರೆ ಅಧಿವೇಶನದಲ್ಲಿ ಪ್ರಸ್ತಾಪಿಸಲಿ; ವಿಪಕ್ಷಗಳಿಗೆ ಗೃಹ ಸಚಿವ ಪರಮೇಶ್ವರ್ ತಿರುಗೇಟು

ಬೆಂಗಳೂರು: ಸರ್ಕಾರದ ವಿರುದ್ಧ ‘ವರ್ಗಾವಣೆ ದಂಧೆ’ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲಿ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಪರಮೇಶ್ವರ್, ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ವರ್ಗಾವಣೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಆರೊಪಕ್ಕೆ ಸಂಬಂಧಿಸಿದಂತೆ ವರ್ಗಾವಣೆ ದಂಧೆ ಆಗಿದ್ದರೆ ವಿಪಕ್ಷಗಳು ಅಧಿವೇಶನದಲ್ಲಿ ಮಾತನಾಡಲಿ ಎಂದು ಟಾಂಗ್ ನೀಡಿದರು.

ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿರುವ ವಿವೇಕಾನಂದಗೂ, ಪೊಲೀಸ್ ಇಲಾಖೆಯಲ್ಲಿನ ವಿವೇಕಾನಂದಗೂ ಸಂಬಂಧವಿಲ್ಲ. ಅವರು ಹೇಳಿದ್ದು ಕಾಕತಾಳೀಯವಾಗಿರಬಹುದು. ಸಮಾಧಾನವಾಗುವ ರೀತಿಯಲ್ಲೇ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...