ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೆಲ ವಿಶ್ವವಿದ್ಯಾಲಯಗಳಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆಯಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ವಿಶ್ವವಿದ್ಯಾಲಯದ ವೆಬ್ ಸೈಟ್ ನಲ್ಲಿ ಶೀಘ್ರವೇ ಪ್ರಕಟಿಸಲಾಗುವುದು ಎಂದು ವಿವಿ ತಿಳಿಸಿದೆ.
ಮೈಸೂರು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಎಲ್ಲಾ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಮುಂದಿನ ಪರೀಕ್ಷಾ ದಿನಾಂಕ ಶೀಘ್ರದಲ್ಲಿಯೇ ಪ್ರಕಟಿಸುವುದಗಿ ಮೈಸೂರು ವಿವಿ ಕುಲಸಚಿವ ಎನ್.ನಾಗರಾಜ್ ತಿಳಿಸಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ Non-NEP ಪರೀಕ್ಷೆ ಮುಂದೂಡಿಕೆಯಾಗಿದೆ. ಪರೀಕ್ಷೆ ದಿನಾಂಕ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ವಿವಿ ತಿಳಿಸಿದೆ.