
ಬೆಂಗಳೂರು: ವೃದ್ಧ ಅತ್ತೆ-ಮಾವನ ಮೇಲೆ ಹಲ್ಲೆ ನಡೆಸಿದ್ದ ವೈದ್ಯಾಧಿಕಾರಿ ಡಾ.ಪ್ರಿಯದರ್ಶಿನಿ ಅವರುಗೆ ಪೊಲೀಸರು ಶೀಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪ್ರಿಯದರ್ಶಿನಿ ಮನೆಗೆ ನುಗ್ಗಿ ವೃದ್ಧ ಅತ್ತೆ-ಮಾವನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರೂ ವೈದ್ಯೆ ವಿಚಾರಣೆಗೆ ಹಾಜರಾಗಿಲ್ಲ ಎನ್ನಲಾಗಿದೆ. ಇದೀಗ ಡಾ.ಪ್ರಿಯದರ್ಶಿನಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಡಾ.ಪ್ರಿಯದರ್ಶಿನಿ ವಿಕ್ಟೋರಿಯಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಯಾಗಿದ್ದಾರೆ.