alex Certify ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: 50 ಸಾವಿರ ಹುದ್ದೆ ಭರ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: 50 ಸಾವಿರ ಹುದ್ದೆ ಭರ್ತಿ

ಕಲಬುರಗಿ: ನಮ್ಮ ಸರ್ಕಾರದ ಅವಧಿಯಲ್ಲಿಯೇ 371ಜೆ ಮೀಸಲಾತಿಯನ್ವಯ ಕಲ್ಯಾಣ ಕರ್ನಾಟಕ ಭಾಗದವರಿಂದಲೆ 50 ಸಾವಿರ ಹುದ್ದೆ ಭರ್ತಿ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದ್ದಾರೆ.

ಕಲಬುರಗಿ ನಗರದ ಎನ್.ವಿ.ಮೈದಾನದಲ್ಲಿ ಬುಧವಾರ ನಡೆದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು 1,460 ಕೋಟಿ ರೂ. ಬೃಹತ್ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈಗಾಗಲೆ ವಿವಿಧ ಇಲಾಖೆಯಲ್ಲಿ 15 ಸಾವಿರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಮುಂದಿನ 2-3 ವರ್ಷಗಳಲ್ಲಿ ಎಲ್ಲಾ ಹುದ್ದೆ ಭರ್ತಿ ಮಾಡುವ ಮೂಲಕ ಸ್ಥಳೀಯರಿಗೆ ಉದ್ಯೋಗ ನೀಡಲಾಗುವುದು ಎಂದರು.

ಕಳೆದ 2022ರ ಡಿಸೆಂಬರ್‍ ನಲ್ಲಿ ಇದೇ ಸ್ಥಳದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದಲ್ಲಿ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ 5,000 ಕೋಟಿ ರೂ. ಅನುದಾನ ನಿಡುವುದಾಗಿ ಘೋಷಿಸಿದ್ದರು, ಅದರಂತೆ ನಮ್ಮ ಸರ್ಕಾರ 5 ಸಾವಿರ ಕೋಟಿ ಹಣ ನೀಡಿದೆ. ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆ, ಕಿದ್ವಾಯಿ ಆಸ್ಪತ್ರೆ, ತಾಯಿ-ಮಕ್ಕಳ ಆಸ್ಪತ್ರೆ, ಜಿಮ್ಸ್ ಆಸ್ಪತ್ರೆ, ಟ್ರಾಮಾ ಸೆಂಟರ್ ಆರಂಭಿಸಿದ್ದೇವೆ. ಸುಟ್ಟು ಗಾಯಗಳ ಘಟಕ, ಕ್ರಿಟಿಕಲ್ ಕೇರ್ ಯುನಿಟ್, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಶಾಖೆ ಸಹ ಮಂಜೂರು ಮಾಡಿದ್ದು, ಒಟ್ಟಾರೆಯಾಗಿ ಕಲಬುರಗಿಯನ್ನು ಮೆಡಿಕಲ್ ಹಬ್ ಆಗಿ ಪರಿವರ್ತಿಸುವ ಸಂಕಲ್ಪ ಹೊಂದಿದ್ದೇವೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...