ಶಿವಮೊಗ್ಗ : ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ದಿ: 03-07-2024 ರಿಂದ 10-11-2024 ರವರೆಗೆ ಜಲಾಶಯದಲ್ಲಿ ನೀರಿನ ಲಭ್ಯತೆ ಅನುಸಾರ ನೀರು ಹರಿಸಲಾಗುವುದು ಎಂದು ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಅಚ್ಚುಕಟ್ಟು ರೈತರು ಹಾಗೂ ಸಾರ್ವಜನಿಕರ, ಜನ, ಜಾನುವಾರುಗಳೊಂದಿಗೆ ಯಾವುದೇ ಚಟುವಟಿಎಕಗಳನ್ನು ಮಾಡದೇ ಮುನ್ನೆಚ್ಚರಿಕೆಯಿಂದಿರಬೇಕೆಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ತುಂಗಾ ಮೇಲ್ದಂಡೆ ಯೋಜನೆ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.