ಬೆಳಗಾವಿ(ಸುವರ್ಣಸೌಧ): ಬರ ಪರಿಹಾರದ ಭಾಗವಾಗಿ ರೈತರಿಗೆ ಒಂದು ಹೆಕ್ಟೇರ್ ಗೆ 2 ಸಾವಿರ ರೂ. ನೀಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಶರಣಗೌಡ ಬಯ್ಯಾಪುರ ಪ್ರಶ್ನೆಗೆ ಉತ್ತರ ನೀಡಿದ ಅವರು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಂಟಿ ಸಮೀಕ್ಷೆ ನಡೆಸಲಾಗಿದೆ. ಭತ್ತ, ರಾಗಿ, ಜೋಳ, ಮೆಕ್ಕೆಜೋಳ, ಸಜ್ಜೆ, ತೊಗರಿ, ಹೆಸರು, ಉದ್ದು, ಉರುಳಿ, ಅವರೆ, ಅಲಸಂದೆ, ಕಡಲೆ, ಸಾಸಿವೆ, ಸೂರ್ಯಕಾಂತಿ, ಹತ್ತಿ, ಕಬ್ಬು, ತಂಬಾಕು ಬೆಳೆ ಹಾಳಾಗಿದೆ.
ಬರ ಪರಿಸ್ಥಿತಿ ನಿವಾರಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಪರಿಹಾರದ ಭಾಗವಾಗಿ ರೈತರಿಗೆ 2 ಸಾವಿರ ರೂ. ನೀಡಲಾಗುವುದು ಎಂದು ಹೇಳಿದ್ದಾರೆ.
ಬರ ಸಂದರ್ಭದಲ್ಲಿ ಸರ್ಕಾರ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಶಾಸಕರು ಸಲಹೆ ನೀಡಿದ್ದಾರೆ. ರೈತರ ಸಾಲ ಮನ್ನಾ ಮಾಡಬೇಕು. ಅಡಿಕೆ ಆಮದು ತಡೆಗೆ ಕ್ರಮ ಕೈಗೊಳ್ಳಬೇಕು. ಜಲಜೀವನ್ ಮಿಷನ್ ಯೋಜನೆ ಅನುಷ್ಠಾನಕ್ಕೆ ವೇಗ ನೀಡಬೇಕು ಎಂದು ಆಗ್ರಹಿಸಿದ್ದಾರೆ.