ಮೈಸೂರು: ಕೇಂದ್ರ ತಂಡದ ವರದಿ ಆಧರಿಸಿ ಬರ ಪರಿಹಾರ ನೀಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಇದೆ ಎಂದು ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ಗ್ರಾಮೀಣ ಪ್ರದೇಶದ ರೈತರನ್ನು ಖುದ್ದಾಗಿ ಭೇಟಿ ಮಾಡಿ ಸಮಸ್ಯೆ ಆಲಿಸುವಂತೆ ಕೇಂದ್ರ ಬರ ಅಧ್ಯಯನ ತಂಡಕ್ಕೆ ಕೇಳಿಕೊಂಡಿದ್ದು, ಈ ತಂಡ ನೀಡುವ ವರದಿ ಆಧರಿಸಿ ಕೇಂದ್ರ ಸರ್ಕಾರ ಪರಿಹಾರ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಮಾಹಿತಿ ಪ್ರಕಾರ 30 ಸಾವಿರ ಕೋಟಿ ರು.ನಷ್ಟು ನಷ್ಟವಾಗಿದೆ. ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ 4860 ಕೋಟಿ ರೂಪಾಯಿ ನೀಡಬೇಕಿದ್ದು, ಕೇಂದ್ರ ತಂಡ ಅಧ್ಯಯನ ನಡೆಸಿದೆ. ತಂಡ ನೀಡಿದ ವರದಿ ಆಧಾರದ ಮೇಲೆ ಪರಿಹಾರ ನಿರ್ಧಾರವಾಗುತ್ತದೆ ಎಂದು ಹೇಳಿದ ಸಿಎಂ, ರಾಜ್ಯದಲ್ಲಿ ಬರದ ಪರಿಸ್ಥಿತಿ ಇದ್ದರೂ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರೆಯಲಿವೆ ಎಂದು ಹೇಳಿದ್ದಾರೆ.