alex Certify BIG NEWS: ರಾಜ್ಯದಲ್ಲಿ ಮಳೆ ಕೊರತೆಯಿಂದ 40 ಲಕ್ಷ ಹೆಕ್ಟೇರ್ ಕೃಷಿ, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮಳೆ ಕೊರತೆಯಿಂದ 40 ಲಕ್ಷ ಹೆಕ್ಟೇರ್ ಕೃಷಿ, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಸುಮಾರು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 2 ಲಕ್ಷ ಹೆಕ್ಟೇರ್ ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು, ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿದೆ. ಈ ತಾಲೂಕುಗಳಿಗೆ ಪರಿಹಾರ ನೀಡುವ ಸಂಬಂಧ ಅಗತ್ಯ ವರದಿಯನ್ನು ಒಂದು ವಾರದಲ್ಲಿ ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಮೇವು ಮತ್ತು ಕುಡಿಯುವ ನೀರಿಗೆ ಪ್ರತ್ಯೇಕ ಪರಿಹಾರದ ಅವಶ್ಯಕತೆ ಇದ್ದು, ಸಂಪೂರ್ಣ ವರದಿ ಸಿದ್ಧಪಡಿಸಲಾಗುತ್ತಿದೆ. ಸುಮಾರು 6 ಸಾವಿರ ಕೋಟಿ ರೂ. ಪರಿಹಾರ ಬೇಕಾಗಿದೆ. ಎರಡನೇ ಹಂತದಲ್ಲಿ ಇನ್ನೂ 41 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗುವುದು. ಕೇಂದ್ರದ ಮಾರ್ಗಸೂಚಿ ಪ್ರಕಾರ ಈ ತಾಲೂಕುಗಳನ್ನು ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಅಕ್ಟೋಬರ್ ತಿಂಗಳ ಕೊನೆಯವರೆಗೆ ಬೆಳೆ ಸಮೀಕ್ಷೆ ಆಧರಿಸಿ ಮತ್ತಷ್ಟು ತಾಲೂಕುಗಳನ್ನು 2ನೇ ಪಟ್ಟಿಯಲ್ಲಿ ಬರಪೀಡಿತ ಎಂದು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...